`ವಿಶ್ವ ತಂಬಾಕು ರಹಿತ ದಿನ’ ನಗರದಲ್ಲಿ ಇಂದು ಜಾಥಾ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕು. ಕ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್  ಇವರ ಸಂಯುಕ್ತಾಶ್ರಾಯದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

 ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್.ಹೆಗಡೆ ಉದ್ಘಾಟಿಸುವರು.  ಜಿಲ್ಲಾ ಆರೋಗ್ಯ ಮತ್ತು ಕು. ಕ ಅಧಿಕಾರಿ ಡಾ. ನಾಗರಾಜ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಎಂ. ಕರೆಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಸುಭಾಶ್‍ಚಂದ್ರ, ಕರುಣಾ ಜೀವ ಕಲ್ಯಾಣ ಟ್ರಸ್ಟ್‍ನ  ಬಸವಲಿಂಗಪ್ಪ ಶಿವನಕೆರೆ ಭಾಗವಹಿಸುವರು.

error: Content is protected !!