ದಾವಣಗೆರೆ, ಜೂ.1- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 15 ಆಗಿದೆ.
January 17, 2025