ದಾವಣಗೆರೆ, ಜೂ.4- ಒಡಿಶಾದಲ್ಲಿ ನಡೆದಿರುವ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟಿರುವ ಜನರ ಕುಟುಂಬ ವರ್ಗಕ್ಕೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನರ ಹಿಂತಿರುಗುವಿಕೆ ನಮ್ಮ ಆದ್ಯತೆಯಾಗಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಪ್ರಯತ್ನ ಜಾರಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರೂ ಬೇಗ ಚೇತರಿಸಿಕೊಳ್ಳುವಂತಾಗಲಿ ಎಂದೂ ಅವರು ಪ್ರಾರ್ಥಿಸಿದ್ದಾರೆ.