ಹರಪನಹಳ್ಳಿ : ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ

ಹರಪನಹಳ್ಳಿ, ಜೂ.5- ಪ್ರಸ್ತುತ ವರ್ಷದ 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್  ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸ ಲಾಗಿದೆ ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರೇಣುಕಾದೇವಿ ತಿಳಿಸಿದರು.

ನೂತನವಾಗಿ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳು  ತಮ್ಮ ಎಸ್‍ಎಟಿಎಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವಿಳಾಸ httpsshp.karnataka gov.in/ ಇಲ್ಲಿ ಸಂಪರ್ಕಿಸಿ ಅರ್ಜಿ ಸಲ್ಲಿಸುವುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.06.2023 ರವರೆಗೆ ಇರುತ್ತದೆ ಎಂದು ಅವರು ತಿಳಿಸಿದರು.

error: Content is protected !!