ದಾವಣಗೆರೆ, ಜೂ. 9- ಜಿಲ್ಲಾ ಸಿಪಾಯಿ ರವಿಚಂದ್ರನ್ ಸೇನೆ ಮತ್ತು ವಿಕ್ರಂ ರವಿಚಂದ್ರನ್ ಅಭಿಮಾನಿಗಳ ಸಂಘದ ವತಿಯಿಂದ ನಾಳೆ ದಿನಾಂಕ 10 ಶನಿವಾರ ಬೆಳಿಗ್ಗೆ 10 ಗಂಟೆಗೆ ಯಲ್ಲಮ್ಮನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 150 ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಪೆನ್ಸಿಲ್, ಪೆನ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಸಂಘದ ಉಪಾಧ್ಯಕ್ಷ ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಾಲಿಕೆ ಸದಸ್ಯರಾದ ಆಶಾ ಉಮೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್ ಜನ್ಮದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ವೇಳೆ 30 ಜನ ಸರ್ಕಾರಿ ಬಸ್ ಚಾಲಕರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎನ್. ಶ್ರವಣಕುಮಾರ್, ವೆಂಕಟೇಶ್ ಉಪಸ್ಥಿತರಿದ್ದರು.