ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆ ಶಾಖೆಯ ಆಶ್ರಯದಲ್ಲಿ ಉಚಿತ ಯೋಗ ತರಬೇತಿ ಶಿಬಿರ ಉದ್ಘಾಟನೆ ಆಗಲಿದೆ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆ ಶಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಉಮಾ ನಾಗರಾಜ್ ತಿಳಿಸಿದ್ದಾರೆ.
ಸಿದ್ಧವೀರಪ್ಪ ಬಡಾವಣೆಯ ಶ್ರೀ ಗಣೇಶ ನಿಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪತಂಜಲಿ ಯೋಗ ಉಪಾಧ್ಯಕ್ಷ ಎಸ್.ಹೆಚ್. ಕಲ್ಲೇಶ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವೇದಾವತಿ ವಲಯ ದಾವಣಗೆರೆ ಸಂಚಾಲಕ ಟಿ.ವಿ. ವಿ.ಸತೀಶ್ ಆಗಮಿಸಲಿದ್ದಾರೆ. ಕಲಾಕುಂಚ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ, ಅಧ್ಯಕ್ಷ ಕೆ.ಹೆಚ್. ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್ ವಹಿಸಿಕೊಳ್ಳಲಿದ್ದಾರೆ.
ಯೋಗ ಪಟುಗಳಾದ ಶ್ರೀಮತಿ ಲೀಲಾ ಸುಭಾಷ್, ಶ್ರೀಮತಿ ಸಂಧ್ಯಾ ಶ್ರೀನಿವಾಸ್ ನಿರಂತರ 10 ದಿನಗಳ ಕಾಲ ಯೋಗ ತರಬೇತಿ ನೀಡಲಿದ್ದಾರೆ. ಆಸಕ್ತರು 8317427179, 9740549009, 9481160476, 9008571113 ಈ ಸನಿಹ ವಾಣಿಗಳಿಗೆ ಸಂಪರ್ಕಿಸಬಹುದು.