ನಗರದಲ್ಲಿ ಇಂದು `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನಾಟಕ

ದಾವಣಗೆರೆ, ಜೂ. 10- ಶ್ರೀಶೈಲ ಮಲ್ಲಿಕಾರ್ಜುನ ವಿವಿಧ ನಾಟಕ ಕಲಾವಿದರ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕ ಸಂಘ (ಎಐಟಿಯುಸಿ ಸಂಯೋಜಿತ) ಇವರ ಸಂಯುಕ್ತಾಶ್ರ ಯದಲ್ಲಿ ನಾಳೆ ದಿನಾಂಕ 11 ರ ಭಾನುವಾರ ಸಂಜೆ 6 ಗಂಟೆಗೆ ನಗರದ ಪದ್ಮಶ್ರೀ ಚಿಂದೋಡಿ ಲೀಲಾ ಕಲಾ ಕ್ಷೇತ್ರದಲ್ಲಿ ಸಂಘದ 9 ನೇ ವಾರ್ಷಿಕೋತ್ಸವದ ಅಂಗವಾಗಿ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ನೀಲಗುಂದ ಬಸವನಗೌಡ್ರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನೀಲಗುಂದ ಗುಡ್ಡದ ಸಂಸ್ಥಾನ ಜಂಗಮ ಪೀಠದ ಶ್ರೀ ಚನ್ನಬಸವ ಶಿವಯೋಗಿಗಳು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ನಾಟಕೋತ್ಸವ ಉದ್ಘಾಟಿಸಲಿದ್ದಾರೆ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಡಿ.ಜಿ. ಶಾಂತನಗೌಡ್ರು, ಬಸವರಾಜ ಶಿವಗಂಗಾ, ಬಿ.ಪಿ. ಹರೀಶ್, ಲತಾ ಮಲ್ಲಿಕಾರ್ಜುನ್, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವವರ ಸಂಘದ ಜಿಲ್ಲಾಧ್ಯಕ್ಷ ವಿ. ಲಕ್ಷ್ಮಣ, ರಾಜ್ಯ ಕಾರ್ಯಾಧ್ಯಕ್ಷ ಹೆಚ್.ಜಿ. ಉಮೇಶ್ ಆವರಗೆರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಬಾಗಲಕೋಟೆ ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಶೀಲ ಕುಮಾರ್ ಭೀಮಪ್ಪ ಬೆಳಗಲಿ, ಬ್ಯಾಡಗಿ ಯುವ ಮುಖಂಡ ಎಂ.ಎಸ್. ಪಾಟೀಲ್, ಕೆಬಿಆರ್ ಡ್ರಾಮಾ ಕಂಪನಿ ಮಾಲೀಕ ಸಿ.ಎಲ್. ಚಿಂದೋಡಿ ಚಂದ್ರಧರ ಮತ್ತಿತರರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವವರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಜಿ.ಉಮೇಶ್ ಆವರಗೆರೆ, ಕಲಾವಿದರ ಸಂಘದ ಸಂಚಾಲಕ
ಪಿ.ಕೆ.ಖಾದರ್, ಡಿ.ಜಿ. ನಾಗರಾಜ್, ಶಿವಕುಮಾರ್
ಡಿ. ಶೆಟ್ಟರ್ ಉಪಸ್ಥಿತರಿದ್ದರು.

error: Content is protected !!