ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ - Janathavaniದಾವಣಗೆರೆ, ಜೂ. 13- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಪತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ತಿಳಿಸಿದ್ದಾರೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಪತ್ರಕರ್ತರ ಮಕ್ಕಳು ದಾವಣಗೆರೆ ಜಿಲ್ಲಾ ಮಟ್ಟದ ಪುರಸ್ಕಾರಕ್ಕೆ ಮತ್ತು ಶೇ. 90ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುವ ಪತ್ರಕರ್ತರ ಮಕ್ಕಳು ಕರ್ನಾಟಕ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ.

ದಾವಣಗೆರೆ ಜಿಲ್ಲಾ ಮಟ್ಟದ ಪುರಸ್ಕಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 80ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಪತ್ರಕರ್ತರ ಮಕ್ಕಳನ್ನು `ವಿದ್ಯಾಸಿರಿ’ ಪ್ರಶಸ್ತಿಯೊಂದಿಗೆ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 80ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಪತ್ರಕರ್ತರ ಮಕ್ಕಳನ್ನು `ವಿದ್ಯಾರತ್ನ’ ಪ್ರಶಸ್ತಿಯೊಂದಿಗೆ ಸನ್ಮಾನಿಸಿ, ಸ್ಮರಣಿಕೆ, ಫಲ-ಪುಷ್ಪದೊಂದಿಗೆ ಗೌರವಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಲ್ಲದೇ, ಎಸ್ಸೆಸ್ಸಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳನ್ನು ಪಡೆದ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಮಕ್ಕಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ.

ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 120ಕ್ಕೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು `ಶಿಕ್ಷಣ ಸಿರಿ’ ಪ್ರಶಸ್ತಿ ಯೊಂದಿಗೆ ವಿಶೇಷವಾಗಿ ಪುರಸ್ಕರಿಸಲಾಗುತ್ತದೆ. 

ದಾವಣಗೆರೆ, ಹರಿಹರ, ಹೊನ್ನಾಳಿ, ನ್ಯಾಮತಿ, ಜಗಳೂರು ಮತ್ತು ಚನ್ನಗಿರಿ ತಾಲ್ಲೂಕುಗಳ ಅರ್ಹ ಪತ್ರಕರ್ತರ ಮಕ್ಕಳು ಆಯಾ ತಾಲ್ಲೂಕುಗಳ ಸಂಘದ ಅಧ್ಯಕ್ಷರನ್ನು  (ಹರಿಹರ – ಶ್ರೀಮತಿ ಶಾಂಭವಿ – 87923 35300), (ಹೊನ್ನಾಳಿ ಮತ್ತು ನ್ಯಾಮತಿ – ಯೋಗೇಶ್ – 79756 94392),  (ಜಗಳೂರು –  ಚಿದಾನಂದ – 97405 89583), (ಚನ್ನಗಿರಿ – 99862 32483) ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಮಂಜುನಾಥ ಕೋರಿದ್ದಾರೆ.

ಅರ್ಹ ಪತ್ರಕರ್ತರ ಮಕ್ಕಳು ಅರ್ಜಿಯನ್ನು ಆಯಾ ತಾಲ್ಲೂಕುಗಳ ಅಧ್ಯಕ್ಷರಿಂದ ಪಡೆದು, ಸ್ವ-ವಿವರ, ಭಾವಚಿತ್ರ, ಅಂಕಪಟ್ಟಿ ಜೆರಾಕ್ಸ್‌ ಪ್ರತಿಯೊಂದಿಗೆ ಬರುವ ಇದೇ ದಿನಾಂಕ 20ರೊಳಗಾಗಿ  ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಜೂನ್ ಮಾಸಾಂತ್ಯಕ್ಕೆ ನಡೆಯುವ ಸಮಾರಂಭದಲ್ಲಿ ಪುರಸ್ಕರಿಸಲಾಗುತ್ತದೆ ಎಂದು ಖಜಾಂಚಿ ಎನ್.ವಿ. ಬದರಿನಾಥ್ ತಿಳಿಸಿದ್ದಾರೆ.

ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಎ. ಫಕೃದ್ದೀನ್, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸಂಪಾದಕರು, `ಇಮೇಜ್’ ಪತ್ರಿಕಾ ಕಾರ್ಯಾಲಯ, ನಾಯಕ ವಿದ್ಯಾರ್ಥಿ ನಿಲಯದ ಎದುರಿನ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್, ಪಿ.ಜೆ. ಬಡಾವಣೆ, ದಾವಣಗೆರೆ.  (ಮೊಬೈಲ್ 94482-77772 ಅಥವಾ 86180-02539 ಅಥವಾ 94487 28858) ಅವರನ್ನು ಸಂಪರ್ಕಿಸಬಹುದು.

error: Content is protected !!