ಜಿಲ್ಲಾ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ

ದಾವಣಗೆರೆ, ಜೂ.18- ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾ ಧಿಕಾರಿಗಳ ಕಾರ್ಯಾಲಯದಿಂದ ಆಡಳಿತ ನ್ಯಾಯಾಧಿಕರಣದಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಇದೇ ದಿನಾಂಕ 23 ರಿಂದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಹ ಅಭ್ಯರ್ಥಿಗಳು ಜುಲೈ 24 ರೊಳಗಾಗಿ ಇಲಾಖಾ ವೆಬ್‍ಸೈಟ್ HYPERLINK “http://www.tw.kar.nic.in”www.tw.kar.nic.in ಮೂಲಕ ಅರ್ಜಿ ಸಲ್ಲಿಸಿ ಮೂಲ ಪ್ರತಿಯನ್ನು ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 45 ರಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿ ಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!