26 ರಂದು `ಸಾವಯವ ಕೃಷಿಯಿಂದ ರೈತರ ಅಭಿವೃದ್ಧಿ’ ಅರಿವು ಕಾರ್ಯಕ್ರಮ

ದಾವಣಗೆರೆ, ಜೂ. 22- ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶದ ವತಿಯಿಂದ ಇದೇ ದಿನಾಂಕ 26 ರ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ  ಹೆಬ್ಬಾಳು ಗ್ರಾಮದ ವಿರಕ್ತ ಮಠದಲ್ಲಿ ಗೋ ಆಧಾರಿತ ಹಾಗೂ ಸಾವಯವ ಕೃಷಿಯಿಂದ ರೈತರ ಅಭಿವೃದ್ಧಿ ಮತ್ತು ಪಂಚ ಮಹಾಭೂತಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ಧನಂಜಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರದ ಸಿದ್ಧಗಿರಿ ಮಠದ ಶ್ರೀ ಅದೃಷ್ಟ ಕಾಡು ಸಿದ್ಧೇಶ್ವರ ಸ್ವಾಮೀಜಿ ಹಾಗೂ ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಅಂದಿನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆಂದು ಹೇಳಿದರು. ಇದೇ ವೇಳೆ ರೈತರೊಂದಿಗೆ ಸಂವಾದ ಏರ್ಪಡಿಸಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ಉಚಿತ ಗೋ ಕೃಪಾಮೃತ ವಿತರಣೆ ಮಾಡಲಾಗುವುದು ಎಂದರು.

ಈ ಕಾರ್ಯಕ್ರಮದ ಅಂಗವಾಗಿ ಇದೇ ದಿನಾಂಕ 25 ರಂದು ಭಾನುವಾರ ಸಂಜೆ 6 ಗಂಟೆಗೆ ಅಂತರ್ಜಲ ತಜ್ಞ ದೇವರಾಜ ರೆಡ್ಡಿ ಅವರು ಜಲ ಮರುಪೂರಣ ಹಾಗೂ ಮಳೆ ನೀರು ಕೊಯ್ಲು ಕುರಿತು ರೈತರಿಗೆ ತರಬೇತಿ ನೀಡಲಿದ್ದಾರೆ.

ಆಸಕ್ತ ರೈತರು ಎರಡು ದಿನ ಮುಂಚಿತವಾಗಿ ಹೆಸರು  ನೋಂದಾಯಿಸಬಹುದು. ವಿವರಕ್ಕೆ ಸಂಪರ್ಕಿಸುವ ಮೊಬೈಲ್ : 9886451, 9945269210. ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗಾಗಿ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ ಮಾಡಬೇಕು. ಇದರಿಂದ ರೈತರಿಗೂ ಆರ್ಥಿಕವಾಗಿ ಸಹಾಯವಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವೆಂಕಟೇಶ್ವರರಾವ್, ಚಿದಾನಂದಪ್ಪ, ಜಿ.ಟಿ. ಬಸವರಾಜ್, ನೇರ್ಲಿಗಿ ಪ್ರಕಾಶ್ ಉಪಸ್ಥಿತರಿದ್ದರು.

error: Content is protected !!