ದಾವಣಗೆರೆ, ಜೂ.25- ಕರ್ನಾಟಕ ಅಲ್ಪಸಂ ಖ್ಯಾತರ ಅಭಿವೃದ್ಧಿ ಜಿಲ್ಲಾ ನಿಗಮದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿ.ಇ.ಟಿ, ನೀಟ್ ಪರೀಕ್ಷೆಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ HYPERLINK “http://kmdconline.karnataka.gov.in”http://kmdconline.karnataka.gov.in ಮೂಲಕ ಅರ್ಜಿ ಭರ್ತಿ ಮಾಡಿ ಪ್ರಿಂಟ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 10 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕ್ಕೆ ಸಲ್ಲಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ವಿದ್ಯಾರ್ಥಿ ಗಳು ಭರಿಸಬೇಕಾದ ಬೋಧನಾ ಶುಲ್ಕಕ್ಕಾಗಿ ಅವರು ವ್ಯಾಸಂಗ ಮಾಡುವ ಕಾಲೇಜಿಗೆ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ಮುಂಚಿತವಾಗಿ ನೇರವಾಗಿ ಹಣ ಪಾವತಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ, ಫೋ: 01892-232349, ಮೊಬೈಲ್ ನಂ : 8277944215 ಗೆ ಸಂಪರ್ಕಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.