5 ರಂದು ಸಂಸದ ಸಿದ್ದೇಶ್ವರರ 71ನೇ ಜನ್ಮದಿನೋತ್ಸವ

5 ರಂದು ಸಂಸದ ಸಿದ್ದೇಶ್ವರರ 71ನೇ ಜನ್ಮದಿನೋತ್ಸವ

ದಾವಣಗೆರೆ, ಜೂ. 30- ಮಾಜಿ  ಕೇಂದ್ರ ಸಚಿವರೂ ಆದ ಸಂಸದ ಜಿ.ಎಂ. ಸಿದ್ಧೇಶ್ವರ ಅವರ 71 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು  ಅಭಿಮಾನಿ ಬಳಗದ ವತಿಯಿಂದ ಜುಲೈ 5 ರಂದು ಬೆಳಿಗ್ಗೆ 10.30 ಕ್ಕೆ ನಗರದ  ಹಳೆ ವಾಣಿ ಹೋಂಡ ಶೋ ರೂಂ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದಿನ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾ ಟಿಸುವರು. ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎ. ನಾರಾಯಣಸ್ವಾಮಿ, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಶ್ರೀರಾಮುಲು, ಮುರುಗೇಶ್ ನಿರಾಣಿ ಭಾಗವಹಿಸಲಿದ್ದಾರೆ.

ವಿಧಾನ ಪರಿಷತ್ ಮುಖ್ಯಸಚೇತಕ ವೈ.ಎ. ನಾರಾಯಣಸ್ವಾಮಿ, ಶಾಸಕರಾದ ಬಿ.ಪಿ. ಹರೀಶ್, ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಜಿ.ಕರುಣಾಕರ ರೆಡ್ಡಿ, ಎಸ್.ವಿ. ರಾಮಚಂದ್ರ, ಮಾಡಾಳು ವಿರೂಪಾಕ್ಷಪ್ಪ, ಪ್ರೊ.ಎನ್. ಲಿಂಗಣ್ಣ, ಎಂ. ಬಸವರಾಜನಾಯ್ಕ, ಡಾ.ಎ.ಹೆಚ್. ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಚನ್ನಗಿರಿ ತುಮ್ಕೋಸ್ ಮಾಜಿ ಅಧ್ಯಕ್ಷ ಹೆಚ್.ಎಸ್. ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಲಿ ದ್ದಾರೆಂದು ಯಶವಂತರಾವ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಪೌರ ಕಾರ್ಮಿ ಕರು, ಕ್ರೀಡಾಪಟುಗಳು, ಬಿಜೆಪಿ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸುಮಾರು 20 ಸಾವಿರ ಜನ ಆಗಮಿಸುವ ನಿರೀಕ್ಷೆ ಇದೆ. ಇವರೆಲ್ಲರಿಗೂ ಊಟದ ವ್ಯವಸ್ಥೆಯನ್ನೂ ಸಹ ಮಾಡಲಾ ಗಿದೆ. ಅಭಿಮಾನಿಗಳೇ ಕಾರ್ಯ ಕ್ರಮದ ಖರ್ಚನ್ನು ಭರಿಸಲಿ ದ್ದಾರೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಆವರಗೆರೆ ಬಳಿ ಇರುವ ಗೋ ಶಾಲೆಗೆ ತೆರಳಿ ಗೋವುಗಳಿಗೆ ಮೇವು ವಿತರಿಸಲಾಗುವುದು. ನಂತರ ನಗರ ದೇವತೆ ದುರ್ಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ವೇದಿಕೆ ಕಾರ್ಯಕ್ರಮಕ್ಕೆ ಅಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ದೇಶ್ವರ ಅವರು ಸತತ ನಾಲ್ಕು ಬಾರಿ ಸಂಸದರಾಗಿ, ಒಂದು ಬಾರಿ ಕೇಂದ್ರ ಸಚಿವ ರಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನಿರಂತರವಾಗಿ 20 ವರ್ಷ ಸಂಸದರಾಗಿ ಸೇವೆ ಸಲ್ಲಿಸುತ್ತಿರು ವುದು ಹಾಗೂ 71ನೇ ವರ್ಷದ ಜನ್ಮ ದಿನದ ಅಂಗವಾಗಿ ಅದ್ದೂರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್, ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎನ್.ಎ. ಮುರುಗೇಶ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಎಸ್.ಟಿ. ವೀರೇಶ್, ದೂಡಾ ಮಾಜಿ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಎ.ವೈ. ಪ್ರಕಾಶ್, ದೇವರಮನಿ ಶಿವಕುಮಾರ್, ಮುಖಂಡರಾದ ಹೆಚ್.ಎನ್. ಶಿವಕುಮಾರ್, ಕೊಂಡಜ್ಜಿ ಜಯಪ್ರಕಾಶ್, ಅಣಬೇರು ಜೀವನಮೂರ್ತಿ, ಮಂಜ್ಯಾನಾಯ್ಕ, ರಮೇಶ್ ನಾಯ್ಕ, ಎಲ್.ಡಿ. ಗೋಣೆಪ್ಪ, ಜಿ.ಎಸ್. ಶ್ಯಾಮ್, ಬಿ.ಟಿ. ಸಿದ್ಧಪ್ಪ, ಶಿವರಾಜ್ ಪಾಟೀಲ್, ಸೋಗಿ ಶಾಂತಕುಮಾರ್, ಸುರೇಶ್, ಎನ್. ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!