ಸುಶೀಲಮ್ಮ ಬಂಕಾಪುರದ ಚನ್ನಬಸಪ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜು (ಎಸ್.ಬಿ.ಸಿ.) ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರ ಇವುಗಳ ಸಾಂಸ್ಕೃತಿಕ, ಕ್ರೀಡಾ, ಎನ್ನೆಸ್ಸೆಸ್ ಘಟಕ ಹಾಗೂ ರೆಡ್ ಕ್ರಾಸ್ ಘಟಕದ ಸಮಾರೋಪ ಸಮಾರಂಭ ಹಾಗೂ ಪ್ರಸಕ್ತ ಸಾಲಿನ ವಿದ್ಯಾರ್ಥಿ – ವಿದ್ಯಾರ್ಥಿನಿಯರ ಸಂಘದ ವಾರ್ಷಿಕೋತ್ಸವ ಸಮಾರಂ ಭವು ಇಂದು ಬೆಳಿಗ್ಗೆ 10.30 ಕ್ಕೆ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳ ಲಾಗಿದೆ. ಅಧ್ಯಕ್ಷತೆಯನ್ನು ಅಥಣಿ ವೀರಣ್ಣ ವಹಿಸುವರು. ಮುಖ್ಯ ಅತಿಥಿಗಳಾಗಿ ಡಾ. ಶಿಶುಪಾಲ್ ಎಸ್., ಬಿ.ಸಿ. ಉಮಾಪತಿ, ಎನ್.ಎ. ಮುರು ಗೇಶ್ ಆಗಮಿಸುವರು. ಪ್ರಾಸ್ತಾವಿಕ ನುಡಿಯನ್ನು ಪ್ರಾಂಶುಪಾಲ ಡಾ. ಷಣ್ಮುಖ ಕೆ. ನಡೆಸಿಕೊಡುವರು.
January 11, 2025