ದಾವಣಗೆರೆ, ಜು. 6- ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ನರಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನವಾಗಿದ್ದು, ಶಾಲೆಯ ಕೊಠಡಿಯಲ್ಲಿದ್ದ 2 ಕಂಪ್ಯೂಟರ್, ಬ್ಯಾಟರಿ ಸೇರಿದಂತೆ 80 ಸಾವಿರ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಈ ಕುರಿತು ಬುಧವಾರ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಬಸವರಾಜಪ್ಪ ಮಾಯಕೊಂಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.