ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ದಾವಣಗೆರೆ, ಜು.9- ಚಿತ್ರದುರ್ಗ ದಲ್ಲಿರುವ ಶ್ರೀ ಕಾಲಭೈರವ ವಸತಿ ಪ್ರೌಢಶಾಲೆಯಲ್ಲಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ (ಬಿಂದು-40) ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ. ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದು, ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಅರ್ಜಿಯನ್ನು ಇದೇ ದಿನಾಂಕ 13ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಖುದ್ದಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂ.08182-220925ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!