ಮಲೇಬೆನ್ನೂರು, ಜು.10- ಜಿಗಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಿ.ಬೇವಿನಹಳ್ಳಿಯ ಶ್ರೀಮತಿ ಜಯಮ್ಮ ಕೋಂ ಬಿ.ಕೆ.ರಂಗನಾಥ್ ಅವರು ಉಳಿದ 1 ತಿಂಗಳ ಅವಧಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಜಯಮ್ಮ ರಂಗನಾಥ್ ಅವರು 11 ಮತಗಳನ್ನು ಪಡೆದು ಆಯ್ಕೆಯಾದರೆ, ಪ್ರತಿಸ್ಪರ್ಧಿ ಜಿಗಳಿಯ ಶ್ರೀಮತಿ ಮಂಜುಳಾ ಕೋಂ ಸಿ.ಎನ್.ಪರಮೇಶ್ವರಪ್ಪ ಅವರು 7 ಮತಗಳನ್ನು ಪಡೆದು ಪರಾಭವಗೊಂಡರು. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಶ್ರೀಮತಿ ವಿನೋದ ಕೋಂ ಜಿ.ಆರ್.ಹಾಲೇಶ್ ಕುಮಾರ್ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ರೇಖಾ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪಿಡಿಓ ಉಮೇಶ್, ಕಾರ್ಯದರ್ಶಿ ಶ್ರೀಮತಿ ಸುಜಾತ ಮತ್ತಿತರರು ಹಾಜರಿದ್ದರು.