ಮಲೇಬೆನ್ನೂರು : ಶಾಲೆಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಕಾರ್ಯಾಗಾರ

ಮಲೇಬೆನ್ನೂರು : ಶಾಲೆಗಳಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಕಾರ್ಯಾಗಾರ

ಮಲೇಬೆನ್ನೂರು, ಜು. 13- ಇಲ್ಲಿನ ಪುರಸಭೆ ವತಿಯಿಂದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತು ಅರಿವು ಮೂಡಿಸುವ ಕಾರ್ಯಾಗಾರವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಪುರಸಭೆ ಮುಖ್ಯಾಧಿಕಾರಿ ಎ. ಸುರೇಶ್ ಮಾತನಾಡಿ, ಪಟ್ಟಣದಲ್ಲಿ ಜುಲೈ 1 ರಿಂದ 28 ರವರೆಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ವನ್ನು ನಡೆಸುತ್ತಿದ್ದು, ಸರ್ಕಾರದ ಆದೇಶದಂತೆ ಏಕಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‌ಗಳು, ಬಂಟಿಂಗ್ಸ್,ಫ್ಲೆಕ್ಸ್, ಪ್ಲೇಟ್, ಧ್ವಜ, ಕಪ್, ಸ್ಪೂನ್, ಅಂಟಿಕೊಳ್ಳುವ ಫಿಲ್ಮ್‌ಗಳು ಸೇರಿದಂತೆ ಇತ್ಯಾದಿ ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಮನೆಯಲ್ಲಿ ಪೋಷಕರಿಗೆ ತಿಳಿಸಬೇಕು ಮತ್ತು ನೀವು ಜಾಗೃತಿ ವಹಿಸಬೇಕೆಂದು ಸುರೇಶ್ ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ್ ಅವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಕೆಟ್ಟ ಪರಿಣಾಮಗಳ ಬಗ್ಗೆ ವಿವರಿಸಿದರು.

ಪುರಸಭೆ ಅಧಿಕಾರಿಗಳಾದ ನವೀನ್, ಶಿವರಾಜ್, ಶಾಲೆಯ ಹಿರಿಯ ಶಿಕ್ಷಕ ಹಾಗೂ ಜಿಲ್ಲಾ ಕಸಾಪ ಗೌ. ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

error: Content is protected !!