ನಾಡಿದ್ದು ನಗರದಲ್ಲಿ ಉದ್ಯೋಗ ಮೇಳ

ದಾವಣಗೆರೆ, ಜು.19-  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ  ಇದೇ ದಿನಾಂಕ 21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಹಲವು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎಸ್ಸಿ (ನರ್ಸಿಂಗ್) ಎ.ಎನ್.ಎಮ್, ಜಿ.ಎನ್.ಎಮ್ ಹಾಗೂ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಕನಿಷ್ಟ 10 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 08192-259446, ಮೊಬೈಲ್ 6361550016 ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.

error: Content is protected !!