ದಾವಣಗೆರೆ, ಜು.19- ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ (ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು (ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್ (ಎಸ್.ಎಸ್.ಎಲ್.ಸಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಹವಾಲ್ದಾರ್ ಹುದ್ದೆಗಳಿಗೆ ಮಾತ್ರ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ದೈಹಿಕ ಪ್ರಮಾಣ ಪರೀಕ್ಷೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ : www.ssckkr.kar.nic.in ಅಥವಾ https://ssc.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇದೇ ದಿನಾಂಕ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ. ಸಂ: 080-25502520, 9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೊ. ಸಂ : 7406323294 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ರವೀಂದ್ರ ಡಿ. ತಿಳಿಸಿದ್ಧಾರೆ.