ಮಲೇಬೆನ್ನೂರು, ಜು. 23 – ಬೆಳ್ಳೂಡಿ ಮಠದ ಚಂದ್ರಗುಪ್ತ ಮೌರ್ಯ ಪಬ್ಲಿಕ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಎಸ್. ಹೆಚ್. ಗಣೇಶ್ ತಾಲ್ಲೂಕು ಮಟ್ಟದ ಚೆಸ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ವಿದ್ಯಾರ್ಥಿಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅಭಿನಂದಿಸಿ ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಭಾಗವಹಿಸಿಬೇಕೆಂದು ಹೇಳಿದರು. ಸಂಸ್ಥೆಯ ಕಾರ್ಯದರ್ಶಿ ಎಸ್. ನಿಂಗಪ್ಪ. ಸಂಸ್ಥೆಯ ಶೈಕ್ಷಣಿಕ ನೀರ್ದೇಶಕಿ ಡಾ. ಶೃತಿ ಇನಾಂದಾರ್ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.
January 29, 2025