ಕಲ್ಯಾಣ ಸಂಘಟಕರ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ

 ದಾವಣಗೆರೆ, ಜು. 23 –  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಕರ  ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಭೂ ಸೇನೆಯ ಜೆ.ಸಿ.ಓ ರಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರಾಂಕ್‌ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಹುದ್ದೆಗೆ ಅರ್ಹರಾಗಿದ್ದು, 20 ದಿನಗಳೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ದೂರವಾಣಿ : 080-25589459  ಸಂಪರ್ಕಿಸಲು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪ ನಿರ್ದೇಶಕ  ಡಾ.ಸಿ.ಎ. ಹಿರೇಮಠ ತಿಳಿಸಿರುತ್ತಾರೆ.

error: Content is protected !!