ದಾವಣಗೆರೆ, ಜು.24- ಹೊನ್ನಾಳಿ ತಾಲ್ಲೂಕಿನ ಹೊಟ್ಯಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರ ನಿಧನಕ್ಕೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿ ನಿಧನದ ಸುದ್ದಿ ಆಘಾತ ಮೂಡಿಸಿದೆ. ಮಾನವ ತತ್ವದ ಮೈಲುಗಳನ್ನು ತನ್ನದಾಗಿಸಿಕೊಂಡು ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಿದ್ದ ಸ್ವಾಮೀಜಿಯವರ ಮಾರ್ಗದರ್ಶನ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ ಎಂದು ತಮ್ಮ ಸಂತಾಪ ಸೂಚಕದಲ್ಲಿ ಅವರುಗಳು ತಿಳಿಸಿದ್ದಾರೆ.
January 10, 2025