ಮಣಿಪುರ ಘಟನೆ ಖಂಡಿಸಿ ಇಂದು ನಗರದಲ್ಲಿ ಸಿಪಿಐ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಘಟನೆಗಳ ಕುರಿತು ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.

 ಕಳೆದ ಎರಡು ತಿಂಗಳಿನಿಂದಲೂ ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಹಿಂಸಾಚಾರ ಮತ್ತು ಗಲಭೆಯನ್ನು ತಡೆಯಲು ಕೇಂದ್ರ ಸರ್ಕಾರ ವಿಫಲವಾಗಿದ್ದು ಅಮಾಯಕ ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ನಡೆಸಿರುವುದನ್ನು ಖಂಡಿಸಿ, ತಪ್ಪಿತಸ್ಥರಿಗೆ ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಮಣಿಪುರ ಘಟನೆ ವಿರೋಧಿಸಿ ಪ್ರತಿಭಟಿಸಲು ಮುಂದಾದ ಎನ್‌ಎಫ್‌ಐಡಬ್ಲ್ಯೂ ಮಹಿಳಾ ಸಂಘಟನೆಯ ಮುಖಂಡರ ಮೇಲೆ ಎಫ್‌ಐಆರ್‌ ಹಾಕಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಜಯದೇವ ಸರ್ಕಲ್ ಬಳಿ ಸಿಪಿಐ ಕಾರ್ಯಕರ್ತರು ಸೇರಿ ಅಲ್ಲಿಂದ ಪ್ರತಿಭಟನೆ ಮೆರವಣಿಗೆ ಮೂಲಕ ದಾವಣಗೆರೆ ಉಪ ವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಹೆಚ್.ಜಿ. ಉಮೇಶ್, ಆವರಗೆರೆ ವಾಸು, ಖಜಾಂಚಿ ಆನಂದರಾಜ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸುವರು.

error: Content is protected !!