ಹರಪನಹಳ್ಳಿ,ಜು.24- ಹರಪನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಅಧಿಕಾರೇತರ ಸದಸ್ಯರನ್ನಾಗಿ ಚಿಕ್ಕೇರಿ ಬಸಪ್ಪ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಪಟ್ಟಣದ ತಾಲ್ಲೂಕು ಪಂಚಾಯ್ತಿಯ ಸಾಮರ್ಥ್ಯ ಸೌಧದಲ್ಲಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಚಿಕ್ಕೇರಿ ಬಸಪ್ಪ ಅವರಿಗೆ ಸರ್ಕಾರದ ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ಹೊರಡಿಸಿದ ಆದೇಶದ ಪ್ರತಿಯನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಎಂ.ವಿ.ಅಂಜಿನಪ್ಪ, ನಿಟ್ಟೂರು ಭೀಮವ್ವ ಸಣ್ಣಹಾಲಪ್ಪ, ಡಿ.ಅಬ್ದುಲ್ ರಹಿಮಾನ್, ಲಾಟಿ ದಾದಾಪೀರ್, ಮುಖಂಡರಾದ ವೈ.ಕೆ.ಬಿ.ದುರುಗಪ್ಪ, ಹುಲಿಕಟ್ಟಿ ಚಂದ್ರಪ್ಪ ಸೇರಿದಂತೆ ಇತರರು ಇದ್ದರು.