ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಅಧಿಕ ನೂಲು ಹುಣ್ಣಿಮೆ

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ನಾಳೆ ಅಧಿಕ ನೂಲು ಹುಣ್ಣಿಮೆ

ದಾವಣಗೆರೆ, ಜು.30- ನಗರದ ಡಿ. ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಧಿಕ ನೂಲು ಹುಣ್ಣಿಮೆ ಪ್ರಯುಕ್ತ ನಾಡಿದ್ದು ದಿನಾಂಕ 1ರಂದು ಶ್ರೀ ಸತ್ಯ ನಾರಾಯಣ ಸ್ವಾಮಿ ‌ಪೂಜಾ ಕಥಾ, ನವಗ್ರಹ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಅರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. 

ಶ್ರೀಮತಿ ಶ್ರೀಮತಿ ಸವಿತಾ ಮೂರ್ತಿ ಶ್ರೀ ನಾಗೇಶ್ ಶೇಟ್‌ ಮತ್ತು ಕುಟುಂಬದವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!