ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30 ಕ್ಕೆ ನಗರದ ರೋಟರಿ ಬಾಲಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಆಯುಷ್ಮಾನ್ ಮತಿನ್ ಕುಮಾರ್ ಉದ್ಘಾಟಿಸಲಿದ್ದು, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ನಿಂಗಪ್ಪ ಬನ್ನಿಹಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಶಾಸಕ ಕೆ.ಎಸ್. ಬಸವಂತಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಓಬಳೇಶ್, ಭೀಮಣ್ಣ ಬಿ. ಸುಣಗಾರ ಪಾಲ್ಗೊಳ್ಳುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಉಪಾಧ್ಯಕ್ಷ ಜಯಕುಮಾರ್ ಹಾದಿಗೆ, ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷ ರಾಜೀವ್ ಶಂಖು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸಂಘಟನೆ ಜಿಲ್ಲಾಧ್ಯಕ್ಷ ನಿಂಗಪ್ಪ ಬನ್ನಿಹಟ್ಟಿ ತಿಳಿಸಿದ್ದಾರೆ.