ಅಧಿಕಾರಿಗಳೇ ಮರೆತಿದ್ದೀರಾ ಕೋಡಿಹಳ್ಳಿ ಗ್ರಾಮ..!

ದಾವಣಗೆರೆ, ಆ.1- ತಾಲೂಕಿನ ಕೋಡಿಹಳ್ಳಿ ಗ್ರಾಮಕ್ಕೆ ಕಳೆದ 25 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಬಸ್ ಬಂದಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸ್ಮಾರ್ಟ್ ಸಿಟಿ ದಾವಣಗೆರೆ ವ್ಯಾಪ್ತಿಯಲ್ಲಿ ಬರುವ ಕೋಡಿಹಳ್ಳಿ ಗ್ರಾಮ, ಅಭಿವೃದ್ಧಿ ಕಾರ್ಯಗಳಿಂದ ಹಿಂದುಳಿದು  ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ನಗರಕ್ಕೆ ಕಾಲಿಡುವ ವಿದ್ಯಾರ್ಥಿಗಳ ಓದು ಕುಂಠಿತಗೊಳ್ಳುತ್ತಿದೆ. ಗ್ರಾಮಸ್ಥರು ನಿತ್ಯವೂ ಸಂಚಾರದ ಕೊರತೆ ಎದುರಿಸುತ್ತಿದ್ದು, ಸರ್ಕಾರಿ ಬಸ್ ಸೌಲಭ್ಯ ಇಲ್ಲದ ಕಾರಣಕ್ಕೆ ಎಷ್ಟೋ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕೆ ವಿರಾಮ ಇಟ್ಟಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು.

ಗ್ರಾಮದ ಅಭಿವೃದ್ಧಿಯ ಮಟ್ಟ  2 ದಶಕಕ್ಕೂ ಅಧಿಕ ಕಾಲದಿಂದ ಕುಸಿದಿದೆ ಎಂದು ಗ್ರಾಮಸ್ಥರು ಹೇಳಿದರು. ಸಂಬಂಧಿಸಿದ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಗ್ರಾಮಸ್ಥರ ಕೆಂಗಣ್ಣಿಗೆ ಬಲಿಯಾಗದೆ,  ಗ್ರಾಮಕ್ಕೆ ಎರಡು ಬಸ್ ಬಿಡಬೇಕೆಂದು ಆಗ್ರಹಿಸಿದರು.

error: Content is protected !!