ವಿಕಲಚೇತನ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ

ದಾವಣಗೆರೆ, ಆ.3- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಫಲಾನುಭವಿ ಆಧಾರಿತವಾದ ವಿವಿಧ ಯೋಜನೆಗಳಿಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಆಧಾರ್‌ ಯೋಜನೆ, ಮೆರಿಟ್ ವಿದ್ಯಾರ್ಥಿವೇತನ, ಅಂಧ ಮಹಿಳೆಗೆ ಜನಿಸುವ ಮಗುವಿನ ಆರೈಕೆಗೆ ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ 8 ಯೋಜನೆಗಳನ್ನು ಡಿ.ಬಿ.ಟಿ.ಗೆ ಒಳಪಡಿಸಿ ಅರ್ಜಿಗಳನ್ನು ಆಹ್ವಾನಿಸಿದ್ದು, https://sevasindhu.karnataka.gov.in  ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಮತ್ತು ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.

2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಿ ಭೌತಿಕ ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ. ಸಂ.  08192-263936 ವಿಕಲಚೇತನರ ಸಹಾಯವಾಣಿ 08192-263939  ಹಾಗೂ
ತಾಲ್ಲೂಕು ಪಂಚಾಯಿತಿ ಎಂ.ಆರ್.ಡಬ್ಲ್ಯೂಗಳಾದ ಶೈಲಜಾ ಕೆ.ಎಂ. (ಹೊನ್ನಾಳಿ)-9886366809, ಕೆ ಸುಬ್ರಮಣ್ಯಂ (ಚನ್ನಗಿರಿ)- 9945738141,  ಶಶಿಕಲಾ ಟಿ. (ಹರಿಹರ)-9945458058, ಎಂ.ಕೆ. ಶಿವನಗೌಡ (ಜಗಳೂರು)-9902105734, ಬಿ. ಚನ್ನಪ್ಪ (ದಾವಣಗೆರೆ)-9590829024 ಇವರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ ತಿಳಿಸಿದ್ದಾರೆ.

error: Content is protected !!