ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ವತಿ ಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕಗಳು ಹಾಗೂ ಜಿಲ್ಲಾ ವರದಿಗಾರರ ಕೂಟದ ಸಹಯೋಗದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಪತ್ರಿಕಾ ದಿನಾಚರಣೆ ಮತ್ತು ಡಿಜಿಟಲ್ ಯುಗದಲ್ಲಿ ಪತ್ರಕರ್ತರ ಭವಿಷ್ಯ ಕುರಿತು ಪತ್ರಕರ್ತರಿಗಾಗಿ ಕಾರ್ಯಾಗಾರ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಭಾಗವಹಿಸಲಿದ್ದಾರೆ. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ.
ಕುಲಸಚಿವರಾದ ಸರೋಜ ಬಿ.ಬಿ., ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ, ಹಣಕಾಸು ಅಧಿಕಾರಿ ಪ್ರೊ.ಆರ್. ಶಶಿಧರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಇ.ಎಂ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದಿನೇಶ ಗೌಡಗೆರೆ, ಪ್ರಧಾನ ಕಾರ್ಯದರ್ಶಿ ಎಸ್.ಸಿದ್ಧರಾಜು, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ.ಸಿ.ವರದರಾಜ ಭಾಗವಹಿಸಲಿದ್ದಾರೆ.