ದಾವಣಗೆರೆ, ಆ.4- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ವತಿಯಿಂದ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟಂಬರ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಸಾರ್ವಜನಿಕರು ಈ ಲೋಕ್ ಅದಾಲತ್ನಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಹಾಗೂ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ ಕ್ರಮಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ್ ಸಾಲ, ಎಂ.ಎಂ.ಡಿ.ಆರ್ ಕಾಯ್ದೆಯಡಿಯ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು.
ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇಧನ ಹೊರತುಪಡಿಸಿ) ಪಿಂಚಣಿ, ವೇತನ ಭತ್ಯೆ, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣ ದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದೂ.08192296364, ತಾಲ್ಲೂಕು ಕಾನೂನು ಸೇವಾ ಸಮಿತಿ ಹರಿಹರ ದೂ.08192296885, ಹೊನ್ನಾಳಿ ದೂ.08188251732, ಚನ್ನಗಿರಿ ದೂ.08189229195 ಮತ್ತು ಜಗಳೂರು ದೂ.08196227600ಗೆ ಸಂಪರ್ಕಿಸಬಹುದೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.