ನಗರದಲ್ಲಿ ಇಂದು ರಕ್ತದಾನ ಶಿಬಿರ

ಎಸ್.ಎಸ್.ಕೇರ್ ಟ್ರಸ್ಟ್ ಮತ್ತು ಎನ್ ಎಸ್ಸೆಸ್ ಘಟಕ ಆರ್. ಎಲ್. ಕಾನೂನು ಕಾಲೇಜು ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಆರ್.ಎಲ್. ಕಾನೂನು ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಯಾಗಿ ಎಸ್.ಎಸ್.ಕೇರ್ ಟ್ರಸ್ಟ್‌ನ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಲಿದ್ದು, ಅತಿಥಿಯಾಗಿ ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕ ಡಾ.ಎಂ.ಜಿ. ಈಶ್ವರಪ್ಪ, ಬಾಪೂಜಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.  ಡಿ.ಎಸ್. ಕುಮಾರ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜ್‌ನ ಪ್ರಾಂಶುಪಾಲ ಡಾ. ಜಿ.ಎಸ್.ಯತೀಶ್ ವಹಿಸಿಕೊಳ್ಳಲಿದ್ದಾರೆ.

error: Content is protected !!