ದಾವಣಗೆರೆ, ಆ. 9 – ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅಲ್ಪ ಸಂಖ್ಯಾತರ ಸಮುದಾಯದ ವಿದ್ಯಾರ್ಥಿ ಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೌದ್ಧ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 75 ಹಾಗೂ ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಮೀಸಲಾತಿ ನೀಡಲಾಗಿದ್ದು, ಉಚಿತವಾಗಿ ಊಟ, ವಸತಿ, ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡಲಾಗುತ್ತಿದೆ.
ಅರ್ಹ ಅಭ್ಯರ್ಥಿಗಳು ಆಗಸ್ಟ್ 16 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ HYPERLINK “https://shp.karnataka.gov.in/” \t “_blank” https://shp.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿ ನಿಲಯಗಳ ವಿವರ : ಕುಂದುವಾಡ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, ದಾವಣಗೆರೆ. 1 ಮತ್ತು 2, ಶಿವಕುಮಾರ್ ಸ್ವಾಮಿ ಬಡಾವಣೆ ಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ. 1 ಮತ್ತು 2,
ಹರಿಹರ ತಾಲ್ಲೂಕಿನ ಗುತ್ತೂರು ಕಾಲೋನಿಯಲ್ಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ, ಹರಿಹರ, ದಾವಣಗೆರೆ, ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿ ಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ದಾವಣಗೆರೆ ಹಾಗೂ ಜಗಳೂರು ಪಟ್ಟಣದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಜಗಳೂರು ಪಟ್ಟಣ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂರವಾಣಿ :08192-250022 ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ವಿ.ಮಠದ್ ತಿಳಿಸಿದ್ದಾರೆ.