ಹರಪನಹಳ್ಳಿ, ಆ.9- ಕ್ವಿಟ್ ಇಂಡಿಯಾ ಚಳುವಳಿಯ ಭಾಗವಾಗಿ ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಬೆಳಗಿನವರೆಗೂ ಹೊಸಪೇಟೆ ತಾಲ್ಲೂಕು ಕಛೇರಿ ಹತ್ತಿರ ಸಿಐಟಿಯು ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯ ಉಪಾಧ್ಯಕ್ಷರಾದ ಟಿ.ವಿ.ರೇಣುಕಮ್ಮ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೊಸಪೇಟೆ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 14ರ ಸಂಜೆಯಿಂದ ಆಗಸ್ಟ್15ರ ಬೆಳಗಿನವರೆಗೂ ನಡೆಯುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುಡಿಯುವ ನೀರು ಯೋಜನೆ ಸಮರ್ಪಕ ಜಾರಿಗಾಗಿ ಹಾಗೂ ಮನೆ, ನಿವೇಶನ ಹಕ್ಕು ಪತ್ರಕ್ಕಾಗಿ ಒತ್ತಾಯಿಸಲಾಗುವುದು ಎಂದರು.
ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಹರಪನಹಳ್ಳಿ ತಾಲ್ಲೂಕಿನಿಂದ ಹೆಚ್ಚಿನ ಸಂಖೆಯಲ್ಲಿ ಕಾರ್ಮಿಕರು, ದೇವದಾಸಿ ಮಹಿಳಾ ವಿಮೋಚನಾ ಸಂಘದ ಕಾರ್ಯಕರ್ತರು ಭಾಗವಹಿಸಿ ಧರಣಿ ಸತ್ಯಾಗ್ರಹವನ್ನು ಯಶಸ್ವಿ ಗೊಳಿಸಬೇಕೆಂದು ಟಿ.ವಿ.ರೇಣುಕಮ್ಮ ಕರೆ ನೀಡಿದ್ದಾರೆ.