ದಾವಣಗೆರೆ, ಆ.10- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಗಣನೀಯ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಒಂದು ಸಂಸ್ಥೆ ಸೇರಿದಂತೆ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುವುದು. ಅರ್ಹ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳು ಆಗಸ್ಟ್ 14 ರೊಳ ಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08192-263939 ಹಾಗೂ 08192-236784 ಸಂಪರ್ಕಿಸಲು ಜಿಲ್ಲಾ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
January 23, 2025