26 ಕ್ಕೆ ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ

ದಾವಣಗೆರೆ, ಆ.11- ಸವಿತಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 10 ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ದಿನಾಂಕ 26 ರಂದು ಬೆಳಿಗ್ಗೆ 10.30 ಕ್ಕೆ ನಗರದ ಚನ್ನಗಿರಿ ಕೇಶವಮೂರ್ತಿ ರೋಟರಿ ಸಭಾಂಗ ಣದಲ್ಲಿ ಆಯೋಜಿಸಲಾಗಿದೆ.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಆ.15 ರೊಳಗಾಗಿ ಸಂಘದ ಕಚೇರಿಗೆ ತಲುಪಿಸುವಂತೆ ತಿಳಿಸಲಾಗಿದೆ‌.

error: Content is protected !!