ಪರಿಸರ ಸ್ನೇಹಿ ಚತುರ್ಥಿ ಆಚರಣೆ

ದಾವಣಗೆರೆ, ಆ.22- ಬರುವ ಸೆಪ್ಟೆಂಬರ್ 18 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಮಹಾನಗರ ಪಾಲಿಕೆಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು, ಗಣೇಶ ಮೂರ್ತಿ ತಯಾರಕರು ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ಮೂರ್ತಿ ತಯಾರಿಸಿ, ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರು ಖರೀದಿಸದಂತೆ ತಿಳಿಸಲಾಗಿದೆ.

ಗಣೇಶ ಮೂರ್ತಿಗಳನ್ನು ಅರಿಶಿಣ ಅಥವಾ ಜೇಡಿ ಮಣ್ಣಿನಿಂದ ತಯಾ ರಿಸಿ, ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾರಾಟ ಮಾಡಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ಗಣೇಶ ಮೂರ್ತಿ ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಂಡು, ಮೂರ್ತಿಗಳನ್ನು ವಶಪಡಿಸಿ ಕೊಳ್ಳಲಾಗುವುದು ಹಾಗೂ ರೂ. 10,000 ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ  ರೇಣುಕಾ ತಿಳಿಸಿದ್ದಾರೆ.

error: Content is protected !!