ಮಡಿವಾಳ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಆ. 20 – ಶ್ರೀ ಮಡಿವಾಳ ಮಾಚಿದೇವ ಸಂಘ, ಜಿಲ್ಲಾ ಸಮಿತಿಯಿಂದ ಜಿಲ್ಲೆಯಲ್ಲಿನ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕಗಳಿಗಿಂತ ಮೇಲ್ಪಟ್ಟು ಉತ್ತೀರ್ಣರಾದ ಮಡಿವಾಳ ಸಮಾಜದ ವಿದ್ಯಾರ್ಥಿಗಳಿಂದ 2022-23ನೇ ಸಾಲಿನ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಆಗಸ್ಟ್ 25ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ: ಅಧ್ಯಕ್ಷರು ಶ್ರೀ ಮಡಿವಾಳ ಮಾಚಿದೇವ ಸಂಘ, ಮಾಚಿದೇವ ಸಮುದಾಯ ಭವನ, 1ನೇ ಮುಖ್ಯ ರಸ್ತೆ, 17ನೇ ತಿರುವು, ವಿನೋಬ ನಗರ, ದಾವಣಗೆರೆ-577006 ಇಲ್ಲಿಗೆ ನೀಡಬೇಕು. ವಿವರಕ್ಕೆ ಸಂಪರ್ಕಿಸಿ : 98440 01462, 99454 25565, 88670 60254, 99800 87033.

error: Content is protected !!