ದಾವಣಗೆರೆ, ಆ.21- ಜಿಲ್ಲೆಯ ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಇದೇ ದಿನಾಂಕ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು ಅಂತ್ಯೋದಯ 10696, ಆದ್ಯತಾ ಪಡಿತರ ಚೀಟಿಗಳು 51509, ಆದ್ಯತೇತರ ಪಡಿತರ ಚೀಟಿ ಗಳು 74,882, ಒಟ್ಟು 137087 ಪಡಿತರ ಚೀಟಿ ಫಲಾನು ಭವಿಗಳ ಇ-ಕೆವೈಸಿ ಬಾಕಿ ಇದ್ದು, ಅಂತಹ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರಕಟಿಸ ಲಾಗುತ್ತದೆ. ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಫಲಾನುಭವಿಗಳು ಇದೇ ದಿನಾಂಕ 31 ರೊಳಗಾಗಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು.
ವಿನಾಯಿತಿ ನೀಡಲಾಗಿರುವ ಪಡಿತರ ಚೀಟಿಯಲ್ಲಿ ಬೆರಳಚ್ಚು ಪಡೆಯಲು ಆಗದೇ ಇರುವ (Exempted Rc’s) ಪಡಿತರ ಫಲಾನುಭವಿಗಳನ್ನು ಅಮಾನತ್ತು ಪಡಿಸದೆ, ಪುನಃ ಬೆರಳಚ್ಚು ಪಡೆಯಲು, ಬೆರಳಚ್ಚು ಬಾರದೇ ಇದ್ದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಐರಿಸ್ (IRIS) ತಂತ್ರಾಂಶವನ್ನು ಬಳಸಿ ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಳಿಸಲಾಗುವುದು.
ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರ ಹಣೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಕೊಳ್ಳದೇ ಇರುವಂತಹ ಪಡಿತರ ಚೀಟಿಗಳ ಸದಸ್ಯರುಗ ಳನ್ನು ಪಡಿತರ ಚೀಟಿಯಿಂದ ಅಮಾನತ್ತುಗೊಳಿಸುವ ಮೂಲಕ ಆಹಾರಧಾನ್ಯ ಮತ್ತು ಡಿಬಿಟಿ ನಗದು ಸೌಲಭ್ಯವನ್ನು ಸೆಪ್ಟೆಂಬರ್ ಮಾಹೆಯಿಂದ ಸ್ಥಗಿತಗೊಳಿಸಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪಡಿತರ ಚೀಟಿದಾರರು ತಮ್ಮ ಕುಟುಂಬದ ಯಾರಾದರೂ ಒಬ್ಬ ಸದಸ್ಯರ ಜಾತಿ ಪ್ರಮಾಣ ಪತ್ರವನ್ನು ನ್ಯಾಯಬೆಲೆ ಅಂಗಡಿಯಲ್ಲಿ ನೀಡಿ ನಿಖರವಾದ ವಿವರ ದಾಖಲಿಸಿಕೊಳ್ಳಲು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಶಿದ್ರಾಮ ಮಾರಿಹಾಳ ತಿಳಿಸಿದ್ದಾರೆ.