ದಾವಣಗೆರೆ, ಆ.21- ಜಿಲ್ಲಾ ವರದಿಗಾರರ ಕೂಟದ ವತಿಯಿಂದ ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ದಿನಾಂಕ 27 ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ.
ಪ್ರತಿವರ್ಷದಂತೆ ಮಾಧ್ಯಮ ದಿನಾಚರಣೆ ಅಂಗವಾಗಿ ಕೊಡಮಾಡುವ ಮಾಧ್ಯಮ ಪ್ರಶಸ್ತಿಗೆ ಈ ಬಾರಿ ಒಂಭತ್ತು ಜನ ಪತ್ರಕರ್ತರು ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಸಿ.ವರದರಾಜ್, ಖಜಾಂಚಿ ಮಧು ನಾಗರಾಜ್ ಕುಂದುವಾಡ ತಿಳಿಸಿದ್ದಾರೆ.
ಕನ್ನಡ ಭಾರತಿ ಸಂಪಾದಕ ಮಲ್ಲಿಕಾರ್ಜುನ ಕಬ್ಬೂರ್, ವಿಜಯವಾಣಿಯ ಸ್ಥಾನಿಕ ಸಂಪಾದಕ ಎಂ.ಬಿ.ನವೀನ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ, ವಾರ್ತಾ ವಿಹಾರ ಸುದ್ದಿ ಸಂಪಾದಕ ಎಂ.ವೈ. ಸತೀಶ್. ದಾವಣಗೆರೆ ಕನ್ನಡಿಗ ಸಂಪಾದಕ ಆರ್. ರವಿ, ಜನತಾವಾಣಿ ಹಿರಿಯ ವರದಿಗಾರ ಎಸ್.ಎ. ಶ್ರೀನಿವಾಸ, ನ್ಯೂಸ್ 18 ಕನ್ನಡ ಸುದ್ದಿವಾಹಿನಿ ಜಿಲ್ಲಾ ವರದಿಗಾರ ಎ.ಪಿ. ಸಂಜಯ್, ರಾಜ್ ನ್ಯೂಸ್ ವರದಿಗಾರ ರಾಮಪ್ರಸಾದ್ ಹಾಗೂ ಸುವರ್ಣ ಸುದ್ದಿ ವಾಹಿನಿಯ ಕ್ಯಾಮೆರಾಮೆನ್ ಕಿರಣ್‌ಕುಮಾರ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.