ದಾವಣಗೆರೆ, ಆ. 22- ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್ಒ)ನ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನವು ಬರುವ ಸೆಪ್ಟಂಬರ್ 1 ರಿಂದ 3 ದಿನಗಳ ಕಾಲ ತುಮಕೂರಿನಲ್ಲಿ ನಡೆಯಲಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಐಡಿಎಸ್ಒ ರಾಜ್ಯ ಸಂಸದೀಯ ಕಾರ್ಯಕಾರಿ ಮಂಡಳಿ ಸದಸ್ಯ ಮಹಾಂತೇಶ ಬೇಳೂರು, ತುಮಕೂರಿನ ಸಿದ್ಧಾರ್ಥ ಮೆಡಿಕಲ್ ಕಾಲೇಜು
ಸಭಾಂಗಣದಲ್ಲಿ ನಡೆಯುವ ಸಮ್ಮೇಳನದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತ ಚರ್ಚೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.
ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಬೇಕು. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು. ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣ ರಕ್ಷಿಸಬೇಕು.
ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡುವುದು. ಅತಿಥಿ ಶಿಕ್ಷಕರ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ಮೊದಲಾದ ಬೇಡಿಕೆಗಳ ಬಗ್ಗೆ ಸಮ್ಮೇಳನದ ಮೂಲಕ ಒತ್ತಾಯಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಟಿ.ಎಸ್. ಸಮನ್, ಧನುಷ್, ಕೌಶಿಕ್, ಚಿರು, ಪೂಜಾ ನಂದಿಹಳ್ಳಿ ಉಪಸ್ಥಿತರಿದ್ದರು.