ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ

ದಾವಣಗೆರೆ, ಆ.22- ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಮಕ್ಕಳು 2005 ಆಗಸ್ಟ್ 1 ರ ನಂತರ ಜನಿಸಿದ್ದು, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 8 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಪ್ರಕರಣವು 2022ರ ಆಗಸ್ಟ್ 1 ರಿಂದ 2023 ರ ಜುಲೈ 31 ರೊಳಗೆ ನಡೆದಿರಬೇಕು. ಆಯ್ಕೆಯಾದ ಮಕ್ಕಳಿಗೆ ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ. 25,000 ಹಾಗೂ ಸಂಸ್ಥೆಗಳಿಗೆ ತಲಾ ರೂ 1,00,000 ಗಳನ್ನು ಪ್ರಶಸ್ತಿ ಪತ್ರದೊಂದಿಗೆ ನೀಡಲಾಗುತ್ತದೆ.

ಆಸಕ್ತರು ಸೆಪ್ಟೆಂಬರ್ 8 ರೊಳಗಾಗಿ ನಗರದ ಎಂ.ಸಿ.ಸಿ  `ಬಿ’
ಬ್ಲಾಕ್ ನ 14ನೇ ಮುಖ್ಯರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ
ನಮೂನೆಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಉಪನಿರ್ದೇಶಕರಾದ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

error: Content is protected !!