ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ, ಆ.22- ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ಸಲ್ಲಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇ ಶಕರು, ದಾವಣಗೆರೆ ತಾಲ್ಲೂಕಿನ ಕಚೇರಿಗೆ ಭೇಟಿ ನೀಡಲು ಜಿ.ಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!