ದಾವಣಗೆರೆ, ಆ.23- ತೋಳಹುಣಸೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಬಡತನ ರೇಖೆಗಿಂತ ಕೆಳಗಿರುವ ಗ್ರಾಮೀಣ ಮಹಿಳೆಯರಿಗೆ 30 ದಿನಗಳ ಕಾಲ ಉಚಿತವಾಗಿ ಊಟ ಮತ್ತು ವಸತಿಯೊಂದಿಗೆ ಮೊಬೈಲ್ ರಿಪೇರಿ, ಮೋಟರ್ ವೈಂಡಿಂಗ್, ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನೀಡಲಾಗುವುದು.
ಆಸಕ್ತರು ಇದೇ ದಿನಾಂಕ 31ರ ಒಳಗಾಗಿ ತರಬೇತಿ ಸಂಸ್ಥೆಗೆ ಭೇಟಿ ನೀಡಿ ನೇರವಾಗಿ ಹೆಸರನ್ನು ನೋಂದಾಯಿಸಬಹುದು. ವಿವರಕ್ಕೆ ಸಂಪರ್ಕಿಸಿ : 7975139332, 7019980484, 9964111314, 9538395817, 9481877076.