ಜಿಲ್ಲಾ ವಕೀಲರ ಸಂಘ, ಆರ್.ಎಲ್.ಕಾನೂನು ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಉಪನ್ಯಾಸ ಕಾರ್ಯಕ್ರಮ ಇಂದು ಮಧ್ಯಾಹ್ನ 2.30ಕ್ಕೆ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆ ಹಾಗೂ ಉಪನ್ಯಾಸವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯ ಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಮಾಡುವರು. ಉಪನ್ಯಾಸ ಮಾಲಿಕೆಗೆ ಚಾಲನೆ ನೀಡುವ ನಾಗಮೋಹನ್ ದಾಸ್ ಅವರು, ಯುವ ವಕೀಲರ ಮುಂದಿರುವ ಸವಾಲುಗಳು ಹಾಗೂ ಸಾಧ್ಯತೆಗಳ ಕುರಿತು ಉಪನ್ಯಾಸ ನೀಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ, ಹೈಕೋರ್ಟ್ ನ್ಯಾಯವಾದಿ ಅನಂತ ನಾಯಕ್, ವಕೀಲ ಕೆ.ಹೆಚ್. ಪಾಟೀಲ್. ಆರ್.ಎಲ್.ಲಾ ಕಾಲೇಜಿನ ಪ್ರಾಚಾರ್ಯ ಡಾ.ಜಿ.ಎಸ್. ಯತೀಶ್ ಆಗಮಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‍ಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ವಕೀಲರ ಸಂಘದ ಕಾರ್ಯದರ್ಶಿ ಎಸ್. ಬಸವರಾಜ, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳು, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ ತಿಳಿಸಿದ್ದಾರೆ.