ದಾವಣಗೆರೆ, ಆ. 27 – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ಕುರಿತು ಜನಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇಲ್ಲಿ ನೋಂದಣಿಯಾಗಿರುವ ಬೀದಿ ನಾಟಕ ಜಾನಪದ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಬೀದಿ ನಾಟಕ ಕಲಾತಂಡಗಳು ತಂಡದ ಸಂಪೂರ್ಣ ವಿವರ ಮತ್ತು ದಾಖಲೆಗಳೊಂದಿಗೆ ಸೆಪ್ಟಂಬರ್ 2 ರೊಳಗೆ ಖುದ್ದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಐ,ಇ.ಸಿ ವಿಭಾಗ. ರೂಂ. ನಂ. 3, ದಾವಣಗೆರೆ ಸಲ್ಲಿಸಬೇಕು. ಆಯ್ಕೆ ಪ್ರಕ್ರಿಯೆ ಕುರಿತು ಕಚೇರಿ ಫಲಕದಲ್ಲಿ ತಿಳಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ.
January 11, 2025