ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ವತಿಯಿಂದ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವುದಾಗಿ ಇನ್‌ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಘೋಷಿಸಿದರು. ಸಮಾಜದ ಅಂಕು-ಡೊಂಕು ತಿದ್ದುವ ಪತ್ರಕರ್ತರಿಗೆ ವೈಯಕ್ತಿಕ ಕುಟುಂಬದ ಬಗ್ಗೆ ಗಮನ ಹರಿಸಲು, ಅಗತ್ಯತೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಇನ್‌ಸೈಟ್ಸ್ ಸಂಸ್ಥೆ ವತಿಯಿಂದ ಉಚಿತ ತರಬೇತಿ ನೀಡುವುದಾಗಿ ಹೇಳಿದರು.
January 11, 2025