ನಗರದಲ್ಲಿ ಇಂದು ವರದಿಗಾರರ ಕೂಟದಿಂದ ಮಾಧ್ಯಮ ದಿನಾಚರಣೆ

ಜಿಲ್ಲಾ ವರದಿಗಾರರ ಕೂಟದ ವತಿಯಿಂದ ಮಾಧ್ಯಮ ದಿನಾಚರಣೆ, ಮಾಧ್ಯಮ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ.

ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡುವರು. 

ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂಹವನ ಅಧ್ಯಯನ ವಿಭಾಗದ ಅಧ್ಯಕ್ಷ ಡಾ. ಶಿವಕುಮಾರ ಕಣಸೋಗಿ ಅವರು ಡಿ.ವಿ. ಗುಂಡಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವರು.  ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಭಾಗವಹಿಸಲಿದ್ದಾರೆ.

error: Content is protected !!