ನಗರದಲ್ಲಿ ನಾಡಿದ್ದು ವಿಶ್ವ ಪತ್ರಿಕಾ ವಿತರಕರ ದಿನಾಚರಣೆ

ದಾವಣಗೆರೆ, ಸೆ. 1- ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ದಿನಾಂಕ 4 ರಂದು ಸೋಮವಾರ ಬೆಳಿಗ್ಗೆ 10.30 ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ  ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಜೆ. ವತನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್  ಉದ್ಘಾಟನೆ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಇನ್‌ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.

ಇದೇ ವೇಳೆ ಹಿರಿಯ ಪತ್ರಿಕಾ ವಿತರಕರಾದ ಉಮೇಶ್, ನಾಗೇಂದ್ರಪ್ಪ ಕಡಾರನಾಯಕನಹಳ್ಳಿ, ನಾಗೇಂದ್ರ, ಟಿ. ಪ್ರಕಾಶ್, ಬಸವರಾಜ್ ಅವರನ್ನು ಸನ್ಮಾನಿಸಲಾಗುವುದು.

ನಗರದಲ್ಲಿ 230 ಜನ ಪತ್ರಿಕಾ ವಿತರಕರಿದ್ದು, ತಾಲ್ಲೂಕು, ಹೋಬಳಿ, ಗ್ರಾಮಗಳಿಂದ 600 ಕ್ಕೂ ಅಧಿಕ ಪತ್ರಿಕಾ ವಿತರಕರಿದ್ದಾರೆ ಎಂದು ಅವರು ವಿವರಿಸಿದರು.

ಪತ್ರಿಕಾ ವಿತರಕರಿಗೆ ಕುಳಿತುಕೊಳ್ಳಲು ಸರಿಯಾದ ಜಾಗದ ವ್ಯವಸ್ಥೆ ಮಾಡಬೇಕು. ವಿತರಣೆ ಮಾಡುವ ಸಂದ ರ್ಭದಲ್ಲಿ ಅಪಘಾತದಿಂದ ಮೃತಪಟ್ಟರೆ ಅವರ ಕುಟುಂ ಬಕ್ಕೆ ಸೂಕ್ತ ಪರಿಹಾರ ನೀಡಬೇಕು. ವಿತರಕರಿಗೆ ವಿಮೆ ವ್ಯವಸ್ಥೆ ಮಾಡಬೇಕು. ಪತ್ರಿಕೆ ವಿತರಣೆ ಮಾಡಲು ವಾಹ ನದ ಅವಶ್ಯಕತೆ ಇದ್ದು, ಸಾಲದ ರೂಪದಲ್ಲಿ ವಾಹನ ನೀಡಬೇಕು. ಪತ್ರಿಕಾ ವಿತರಕರ ಮಕ್ಕಳಿಗೆ ಶಿಕ್ಷಣದ ವೆಚ್ಚ ನೀಡಬೇಕು. 60 ವರ್ಷದ ನಂತರ ಪತ್ರಿಕಾ ವಿತರಕರಿಗೆ ಪಿಂಚಣಿ ಸೌಲಭ್ಯ ನೀಡಬೇಕು. ಸೂಕ್ತ ನಿವೇಶನದೊಂದಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂಬ ಬೇಡಿಕೆಗಳನ್ನು ಈಡೇರಿ ಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಸಂಘದ ಅಧ್ಯಕ್ಷ ಹೆಚ್. ಚಂದ್ರು, ಇತರೆ ಪದಾಧಿಕಾರಿಗಳಾದ ಕೆ. ಅರುಣ್ ಕುಮಾರ್, ಎಂ.ಬಿ. ಬಸವರಾಜ್, ಎ.ನಂದಕುಮಾರ್, ಎ. ನಿಂಗಪ್ಪ, ಟಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

error: Content is protected !!