ಶ್ರೀ ಗುರು ವಾದ್ಯವೃಂದ ಮತ್ತು ಶ್ರೀ ಸಂಚಾರಿ ಕೆ.ಬಿ.ಆರ್. ಡ್ರಾಮಾ ಕಂಪನಿ ಇವರುಗಳ ಸಹಯೋಗದಲ್ಲಿ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನಾಟಕ ಪ್ರದರ್ಶನ ಮತ್ತು ಸುಗಮ ಸಂಗೀತ ಕಾರ್ಯಕ್ರಮವು ಇಂದು ಸಂಜೆ 6 ಗಂಟೆಗೆ ನಡೆಯಲಿದೆ.
ಸಾನ್ನಿಧ್ಯವನ್ನು ಶ್ರೀ ಬಸವಪ್ರಭು ಸ್ವಾಮೀಜಿ ವಹಿಸುವರು. ಸಮಾರಂಭವನ್ನು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಪಿ.ಎನ್. ಲೋಕೇಶ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಎಂ.ಜಿ.ಈಶ್ವರಪ್ಪ ವಹಿಸುವರು.
ವಿಶೇಷ ಆಹ್ವಾನಿತರಾಗಿ ಹರಿಹರ ತಹಶೀಲ್ದಾರ್ ಪೃಥ್ವಿ ಸಾನಿಕಂ, ಹೊನ್ನಾಳಿ ತಹಶೀಲ್ದಾರ್ ತಿರುಪತಿ ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್, ಕಾಂಗ್ರೆಸ್ ಮುಖಂಡ ದಿನೇಶ್ ಶೆಟ್ಟಿ, ಎ. ನಾಗರಾಜ್ ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಜಗಳೂರು ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ, ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೊಟ್ರೇಶ್ ಜಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಪೊಲೀಸ್ ನಿರೀಕ್ಷಕರಾದ ಗುರುಬಸವರಾಜ್, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರಿಬಸಪ್ಪ, ಸಮಾಜ ಸೇವಕ ಬಿ.ಕೆ. ಗಣೇಶ್ ಆಗಮಿಸುವರು. ಪ್ರಾಸ್ತಾವಿಕವಾಗಿ ರಂಗಭೂಮಿಯ ಹಿರಿಯ ಕಲಾವಿದ ಚಿಂದೋಡಿ ಶಂಭುಲಿಂಗಪ್ಪ ಮಾತನಾಡುವರು.
ಸಮಾರಂಭದ ಅಂಗವಾಗಿ ಶ್ರೇಷ್ಠ ಕಲಾವಿದರಿಂದ `ಸೋತು ಗೆದ್ದ ಸಾದ್ವಿ’ ನಾಟಕ ಪ್ರದರ್ಶನ ನಡೆಯಲಿದೆ ಮತ್ತು ರಾಜೇಶ್ ಮತ್ತು ತಂಡದವರಿಂದ ಸುಗಮ ಸಂಗೀತ ಏರ್ಪಡಿಸಲಾಗಿದೆ.