ಜಾಗೃತ ಮಹಿಳಾ ಸಂಘ, ಕೌಟುಂಬಿಕ ಸಲಹಾ ಕೇಂದ್ರ ಮತ್ತು ಸ್ವಾಧಾರ ಗೃಹದ ವತಿಯಿಂದ ಬಿ.ವಿಮಲದಾಸ್ ಸೇವಾ ಪುರಸ್ಕಾರ ಸಮಾರಂಭವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದು ಜಾಗೃತ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಉಮಾ ವೀರಭದ್ರಪ್ಪ ತಿಳಿಸಿದ್ದಾರೆ.
ಹೊನ್ನಾಳಿ ಜನರಲ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಟಿ.ನಾಗರತ್ನ ಅವರಿಗೆ ಸೇವಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.
ಇಂದು ಬೆಳಿಗ್ಗೆ 11.30 ಗಂಟೆಗೆ ಜಾಗೃತ ಮಹಿಳಾ ಸಂಘದ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ವಾಸಂತಿ ಉಪ್ಪಾರ್, ಡಿಆರ್‌ಎಂ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಶಕುಂತಲಾ ಗುರುಸಿದ್ದಯ್ಯ, ಎಸ್‌ಎಸ್ ಮೆಡಿಕಲ್ ಕಾಲೇಜು ಉಪ ಪ್ರಾಂಶುಪಾಲರಾದ ಡಾ.ಶಶಿಕಲಾ ಕೃಷ್ಣಮೂರ್ತಿ, ನಿವೃತ್ತ ಉಪನ್ಯಾಸಕ ರಾದ ಶೋಭಾ ಬಸವರಾಜ್, ಬಸವರಾಜ್ ಅತಿಥಿಗಳಾಗಿ ಆಗಮಿಸಲಿದ್ದಾರೆ .